ಪುತ್ತೂರು:ಆಂಧ್ರಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ವಲಯದ ಕ್ರೀಡಾಕೂಟದಲ್ಲಿ 100, 200 ಹಾಗೂ 400 ಮೀಟರ್ ಓಟ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದು ಗಮನಾರ್ಹ ಸಾಧನೆ ಮಾಡಿದ ಪುತ್ತೂರು ಗ್ರಾಮಾಂತರ ಮಂಡಲದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ಳಿಪಾಡಿ ಗ್ರಾಮದ ಲಕ್ಷ್ಮಣ್ ಗೌಡ ಮತ್ತು ಅಶ್ವಿನಿ ದಂಪತಿಯ ಪುತ್ರಿ ಕುಮಾರಿ ಆತ್ಮಿ ಅವರನ್ನು ಬಿಜೆಪಿ ವತಿಯಿಂದ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.
ಆತ್ಮಿಯವರ ಕ್ರೀಡಾ ಸಾಧನೆಯನ್ನು ಅಭಿನಂದಿಸಿದ ಮುಖಂಡರು, ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಹಿರಿಯ ಬಿಜೆಪಿ ನಾಯಕ ಅಪ್ಪಯ್ಯ ಮಣಿಯಾಣಿ, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜ್ರೆಮಾರು, ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್ ಹಾಗೂ ವಿದ್ಯಾಧರ್ ಜೈನ್, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮುಕುಂದ ಬಜತ್ತೂರು, ಫಲಾನುಭವಿ ಪ್ರಕೋಷ್ಟದ ಜಿಲ್ಲಾ ಸಂಚಾಲಕ ನಿತೀಶ್ ಕುಮಾರ್, ತರಬೇತಿ ಪ್ರಕೋಷ್ಟದ ಜಿಲ್ಲಾ ಸಂಚಾಲಕ ಚಂದ್ರಶೇಖರ್ ರಾವ್ ಬಪ್ಪಳಿಗೆ, ನಗರ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಉಪ್ಪಿನಂಗಡಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಅತ್ರಮಜಲು, ಕಾರ್ಯದರ್ಶಿ ಮೋಹನ್ ಪಕ್ಕಳ, ಮಾಜಿ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಮುಂಗ್ಲಿಮನೆ, ಬಿಜೆಪಿ ಪ್ರಮುಖರಾದ ವಿಶ್ವನಾಥ್ ಕುಲಾಲ್, ರಾಮಣ್ಣ ಗುಂಡೋಳೆ, ಬೂತ್ ಅಧ್ಯಕ್ಷರಾದ ಜನಾರ್ಧನ ಗೌಡ ಕೋಡಿ, ಗಿರೀಶ್, ಪುಷ್ಪರಾಜ್, ಸೇಸಪ್ಪಗೌಡ, ಮಲ್ಲಿಕಾ ಮೊದಲಾದವರು ಉಪಸ್ಥಿತರಿದ್ದರು.





























