ಪುತ್ತೂರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು – ವಿಟ್ಲ ಘಟಕ , ರೋಟರಿ ಕ್ಲಬ್ ಪುತ್ತೂರು (East) ಹಾಗೂ ರೋಟರಿ ಕ್ಲಬ್ ವಿಟ್ಲ ಮತ್ತು ಸಮರ್ಪಣ್ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ಸೆ.13 ರಂದು ಸುವರ್ಣ ರಂಗಮಂದಿರ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬೆ ಟ್ರಸ್ಟ್ (ರಿ.), ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ರೋಟರಿ ಕ್ಯಾಂಪೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಭಾಗಿತ್ವದಲ್ಲಿ ಶಿಬಿರ ನಡೆಯಲಿದೆ.
ಸೆ. 13ರಂದು ಭಾನುವಾರ ಶಿಬಿರ ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಶಿಬಿರದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಲಿದ್ದು, ವಿವಿಧ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ.




























