ಸುಳ್ಯ: ಬಸ್ ಕಾರು ಮತ್ತು ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಸುಳ್ಯ ಬಳಿ ನಡೆದಿದೆ.
ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರಸ್ತೆಗೆ ಅಡ್ಡವಾಗಿ ನಿಂತಿದ್ದ ಬಸ್‌ನ್ನು ತೆರವುಗೊಳಿಸಲಾಯಿತು.



























