ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಾಟೆಕಲ್ ಬಳಿಯ ಪನೀರ್ ಚರ್ಚ್ ಬಳಿಯ ತಿರುವಿನಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಕಾರಿನ ಚಾಲಕ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಅವರು ತಮ್ಮ ಸ್ವಿಫ್ಟ್ ಕಾರಿನಲ್ಲಿ ದೇರಳಕಟ್ಟೆಯಿಂದ ಪನೀರ್ ರಸ್ತೆಯ ಮೂಲಕ ಬೀರಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಪನೀರ್ ಚರ್ಚ್ ಬಳಿ ತಿರುವು ಪಡೆಯುವ ವೇಳೆ ವಾಹನದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ವರದಿಯಾಗಿದೆ.
ಮಗುಚಿ ಬಿದ್ದ ವಾಹನವು ಹತ್ತಿರದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.



























