ಶಿಶಿಲ: ಇಲ್ಲಿನ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ.
ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅಗತ್ಯ ಕಾರ್ಯಾಚರಣೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿನ್ನಮ್ಮ ಅವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಮೃತರು ಪತಿ ತನಿಯಪ್ಪ ಗೌಡ, ಮಕ್ಕಳಾದ ಸತ್ಯಶ್ರೀ ಹಾಗೂ ಆದಿತ್ಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.



























