ಟೀಮ್ ಕಲ್ಲೇಗ ಟೈಗರ್ಸ್ (ರಿ.) ಇದರ 9ನೇ ವರ್ಷದ ಪಿಲಿಏಸ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಇಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೆರವೇರಿತು.
ಪ್ರಧಾನ ಅರ್ಚಕರಾದ ವಸಂತ ಕೆದಿಲಾಯ ಇವರು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಈಶ್ವರ್ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ್, ಯುವ ಕಾಂಗ್ರೆಸ್ ನ ಮಾಜಿ ಜಿಲ್ಲಾಧ್ಯಕ್ಷ ಅಭಿಷೇಕ್ ಬೆಳ್ಳಿಪ್ಪಾಡಿ, ಪುತ್ತೂರು ಬಿಜೆಪಿ ಯುವಮೋರ್ಚ ನಗರ ಮಂಡಲ ಅಧ್ಯಕ್ಷ ನಿತೇಶ್ ಕಲ್ಲೇಗ, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್, ಯುವ ಉದ್ಯಮಿ ರಂಜಿತ್ ಬಂಗೇರ ಸೇರಿದಂತೆ ತಂಡದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.



























