ಪುತ್ತೂರು: ಪುತ್ತೂರಿನ ಹೃದಯಭಾಗದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿರುವ ಗಾಂಧಿ ಪ್ರತಿಮೆಯನ್ನು ವಿಕೃತಗೊಳಿಸಿರುವ ಘಟನೆ ಜು.1ರಂದು ಬೆಳಕಿಗೆ ಬಂದಿದೆ.
ಕಿಡಿಗೇಡಿಗಳು ಗಾಂಧಿ ಪ್ರತಿಮೆಯ ಕನ್ನಡಕ ತೆಗೆದು ಪ್ರತಿಮೆಯ ತಲೆಗೆ ಇಟ್ಟು ಹಾಗೂ ಪ್ರತಿಮೆಯ ತಲೆಗೆ ಟೀ ಶರ್ಟ್ ನ್ನು ಇಟ್ಟು ಗಾಂಧೀಜಿಯನ್ನು ಅವಮಾನಗೊಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪುತ್ತೂರು ಡಿವೈ ಎಸ್ ಪಿ ಡಾ. ಗಾನ ಪಿ ಕುಮಾರ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್ ರವರು ಕಿಡಿಗೇಡಿಗಳ ಪತ್ತೆಯ ಕಾರ್ಯಾಚರಣೆಗೆ ಇಳಿದಿದ್ದಾರೆ.