ಬಂಟ್ವಾಳ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್ ಅವರ ಆರೋಗ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ರಮಾನಾಥ ರೈ ಹಾಗೂ ಡೆನ್ಜಿಲ್ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದರು.



























