ಬಂಟ್ವಾಳ: ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯವನ್ನು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅವರು ರಮಾನಾಥ ರೈ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಶೀಘ್ರ ಚೇತರಿಸಿಕೊಳ್ಳುವಂತೆ ಹಾರೈಸಿದರು.


























