ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.) ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಮೂಲತ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಯೋಳಿ ನಿವಾಸಿಯಾಗಿದ್ದ ಶೀನಪ್ಪ ಗೌಡ ಅವರು ಕೊಕ್ಕಡ ಗ್ರಾಮದ ಕೆಂಪಕೋಡಿ ಎಂಬಲ್ಲಿ ಕುಟುಂಬದ ಜೊತೆ ವಾಸವಾಗಿದ್ದರು.
ಎರಡು ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆರಂಭದಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆ, ಆ ಬಳಿಕ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಸೆ.22ರಂದು ಬೆಳಗ್ಗೆ ನಿಧನರಾಗಿದ್ದಾರೆ. ಇವರು ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿ, ಅರಣ್ಯ ರಕ್ಷಕರಾಗಿ ಸುಮಾರು 25 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ಮೃತರು ಪತ್ನಿ ಕಮಲ, ಪುತ್ರರಾದ ಸಂತೋಷ್, ಉಮೇಶ, ಸರ್ವೇಶ, ಮೂವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


























