ಪುತ್ತೂರು: ವಿಜಯಸಾಮ್ರಾಟ್ ಪುತ್ತೂರು ಸಂಸ್ಥೆಯ ವತಿಯಿಂದ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪಿಲಿಗೊಬ್ಬು ಸೀಸನ್–4’ ಕಾರ್ಯಕ್ರಮದ ಯಶಸ್ಸಿಗಾಗಿ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮವು ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಯಾಗಿ ನೆರವೇರಬೇಕು ಹಾಗೂ ಎಲ್ಲರಿಗೂ ಒಳಿತಾಗಲಿ ಎಂಬ ಸಂಕಲ್ಪದೊಂದಿಗೆ ದೇವಸ್ಥಾನ ಹಾಗೂ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಲ್ಲತ್ತಡ್ಕ ಹೊಸಮ್ಮ ದೈವಸ್ಥಾನದ ಅಧ್ಯಕ್ಷರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಶ್ರೀ ಎಸ್.ಬಿ. ಜಯರಾಮ ರೈ ಬಳಜ್ಜ,ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ, ಪಿಲಿಗೊಬ್ಬು ಸಮಿತಿಯ ಸಹಸಂಚಾಲಕ ಶ್ರೀ ರಾಜೇಶ್ ರೈ ಪರ್ಪುಂಜ ಹಾಗೂ ಸಮಿತಿಯ ಉಪಾಧ್ಯಕ್ಷರಾದ ಶ್ರೀ ದಿನೇಶ್ ವಾಸುಕಿ ಉಪಸ್ಥಿತರಿದ್ದರು.


























