ಪುತ್ತೂರಿನ ಇತಿಹಾಸದಲ್ಲಿ ಪ್ರಪ್ರಥಮಬಾರಿಗೆ ಗಿರಿಜಾ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು ಶ್ರೀ ಮಹಾಲಿಂಗೇಶ್ವರನ ಅಪ್ಪಣೆಗಾಗಿ ಪ್ರಾರ್ಥನೆ ನೆರವೇರಿಸಲಾಯಿತು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಕಳೆದ ಮೂರು ವರ್ಷ ಲಕ್ಷಾಂತರ ಭಕ್ತರನ್ನು ಜೋಡಿಸಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಸುತ್ತಿದ್ದು ಈ ಭಾರಿ ಗಿರಿಜಾ ಕಲ್ಯಾಣೋತ್ಸವವನ್ನು ನಡೆಸಲು ತೀರ್ಮಾನಿಸಿದ್ದು ಡಿಸೆಂಬರ್ ತಿಂಗಳಲ್ಲಿ ದೇವಾಲಯದ ದೇವರುಮಾರು ಗದ್ದೆಯಲ್ಲಿ ನಡೆಯಲಿದ್ದು ಐತಿಹಾಸಿಕ ಕ್ಷಣಕ್ಕೆ ಭಕ್ತರು ಸಾಕ್ಷಿಯಾಗಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ 27ರ ಆದಿತ್ಯವಾರ ಹಿಂದೂ ಬಂಧುಗಳ ಸಭೆ ನಡೆದು ಗಿರಿಜಾ ಕಲ್ಯಾಣೋತ್ಸವ ಸಮಿತಿ ರೂಪುಗೊಳ್ಳಲಿದೆ. ಪ್ರಾರ್ಥನೆಯ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.



























