ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ (62) ಅವರು ನೀಡಿದ ದೂರಿನ ಮೇರೆಗೆ ಆರೋಪಿ ಪ್ರಭಾಕರ ಹೆಗ್ಡೆ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅಪಘಾತದ ದೃಶ್ಯವನ್ನು ಯಾರೋ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಆ ಪೋಸ್ಟ್‌ಗೆ ಆರೋಪಿ ಪ್ರಭಾಕರ ಹೆಗ್ಡೆ ಅವರು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ಹಾಗೂ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ. 130/2026, ಭಾರತೀಯ ನ್ಯಾಯ ಸಂಹಿತೆ (BNS)ಯ ಕಲಂ 351(2), 352ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























