ಬೆಂಗಳೂರು: ತುಳುನಾಡ ಜವನೆರ್ ವತಿಯಿಂದ ಅಷ್ಟಮಿದ ಐಸಿರ ಕಾರ್ಯಕ್ರಮ ಬೆಂಗಳೂರಿನ ವಿಜಯನಗರ ಅತ್ತಿಕೊಪ್ಪೆ ಬಳಿಯ ಬಂಟರ ಸಂಘದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ತುಳುನಾಡಿನ ಸಂಸ್ಕೃತಿ ಅನಾವರಣಗೊಂಡಿತು. ಮುಖ್ಯ ಅತಿಥಿಗಳಾಗಿ ಹಲವು ಗಣ್ಯರು ಭಾಗವಹಿಸಿದ್ದು ವಿಶೇಷವಾಗಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು.
ಬೆಳಗ್ಗೆ ಪ್ರಾರಂಭವಾದ ಕಾರ್ಯಕ್ರಮದ ನಿರೂಪಣೆಯನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿಯಾಗಿದ್ದು ಮಂಗಳೂರಿನ ಶ್ರೀನಿವಾಸ ಕಾಲೇಜಿನ ಉಪನ್ಯಾಸಕಿ ಪ್ರಜ್ಞಾ ಓಡಿಲ್ನಾಳ ನೆರವೇರಿಸಿದರು.



























