ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂಬ ಆರೋಪದಡಿ ವಕೀಲ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್ ಹನೀಫ್ (43) ನೀಡಿದ ದೂರಿನಂತೆ, ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು.
ಈ ವೇಳೆ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.



























