ಮಂಗಳೂರು: ಸಿಎಚ್‌ಟಿ (ಹೈಡ್ರೋ ಸಲ್ಫರ್ ಟ್ರೀಟ್‌ಮೆಂಟ್) ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿ ಬಳಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇದೀಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಘಟನೆಯಲ್ಲಿ ಘಟಕದಲ್ಲಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬವರು ಶೇ.35ರಷ್ಟು ಸುಟ್ಟ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಐಸಿಯುನಲ್ಲಿದ್ದು, ವೈದ್ಯರ ಪ್ರಕಾರ ಅಪಾಯದಿಂದ ಪಾರಾಗಿದ್ದಾರೆ.
ಘಟಕದ ಪಕ್ಕದ ಕಚೇರಿಯಲ್ಲಿದ್ದ ಇನ್ನೂ ಆರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಹಾಗೂ ತಪಾಸಣೆ ನಡೆಸಲಾಗಿದೆ.
ಘಟನಾ ಸ್ಥಳಕ್ಕೆ ಸಿಪಿ, ಡಿಸಿ ಹಾಗೂ ಸಿಇಒ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸದ್ಯ ಯಾವುದೇ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿಯಂತ್ರಣದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.


























