ಪುತ್ತೂರು: ಮಂಗಳೂರು–ಮಡಗಾಂವ್ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ನ್ನು ಬೆಂಗಳೂರಿನವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ರೈಲು ಸುಬ್ರಹ್ಮಣ್ಯ ರೋಡ್ ಹಾಗೂ ಕಬಕ–ಪುತ್ತೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸಲಿದೆ.
ಈ ಕುರಿತು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
2025ರ ಆಗಸ್ಟ್ 6ರಂದು ಮಂಗಳೂರು–ಬೆಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಆರಂಭಿಸುವಂತೆ ಸಂಸದರು ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿರುವ ಸಚಿವರು, ಈಗಾಗಲೇ ಸಂಚರಿಸುತ್ತಿರುವ ಮಡಗಾಂವ್–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನ್ನು ಸುಬ್ರಹ್ಮಣ್ಯ ರೋಡ್ ಹಾಗೂ ಕಬಕ–ಪುತ್ತೂರು ಮೂಲಕ ಬೆಂಗಳೂರಿನವರೆಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಸ್ತರಣೆಯ ಬಳಿಕ ರೈಲು 26655/26656 ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸಂಚರಿಸಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.



























