ಬಂಟ್ವಾಳ: ಮಾಣಿ – ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.30ರಂದು ಸಂಜೆ ನಡೆದಿದೆ.
ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದೆ. ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದರು.
ಕಲ್ಲಡ್ಕದಿಂದ ವಾಹನದಲ್ಲಿ ಬಂದಿದ್ದ ಹರೀಶ್ ಅವರು ದಾಸಕೋಡಿಯಲ್ಲಿ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಮಾಣಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸಂಜೆ ಸುಮಾರು 6.45ರ ವೇಳೆಗೆ ಅಪಘಾತ ಸಂಭವಿಸಿದ್ದು, ತೀವ್ರ ಗಾಯಗೊಂಡ ಹರೀಶ್ ನಾಯ್ಕ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.



























