ಸುಳ್ಯ: ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಗ್ಯಾರೇಜ್‌ನಲ್ಲಿ ಇರಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆ.26ರಂದು ರಾತ್ರಿ ಈ ಘಟನೆ ನಡೆದಿದ್ದು, ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 120/2026ರಂತೆ BNS ಕಲಂ 326(g) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.


























