ಸುಳ್ಯ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ಪೊಲೀಸ್ ಠಾಣೆಯ ಅ.ಕ್ರ. 252/2014, ಐಪಿಸಿ ಕಲಂ 399, 402ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಸುಳ್ಯ ಠಾಣೆಯ ಸಿಬ್ಬಂದಿಗಳಾದ ಹೆಡ್‌ಕಾನ್‌ಸ್ಟೆಬಲ್ 368 ರಾಜು ನಾಯ್ಕ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ 2308 ಸಂತೋಷ್ ಅವರು ಕಾರ್ಯಾಚರಣೆ ನಡೆಸಿ ಅಶ್ರಫ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



























