ವಿಟ್ಲ: ಸರಕಾರಿ ಜಾಗದಲ್ಲಿ ಹಣವನ್ನು ಪಣಕ್ಕಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇಲೆ ವಿಟ್ಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅ.2ರಂದು ಮಧ್ಯಾಹ್ನ ಪೆರುವಾಯಿ ಗ್ರಾಮದಲ್ಲಿ ನಡೆದಿದೆ.
ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣ ಪಣಕ್ಕಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಈ ವೇಳೆ ಕೋಳಿ ಅಂಕ ನಡೆಯುತ್ತಿರುವುದು ದೃಢಪಟ್ಟಿದ್ದು, ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಅವರನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕತ್ತಿಗಳು ಹಾಗೂ ರೂ.3,050 ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 203/2026ರಂತೆ ಪ್ರಕರಣ ದಾಖಲಿಸಲಾಗಿದ್ದು, ಕೆಪಿ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 3, 11(1)(m)(ii), 11(1)(n) ಹಾಗೂ ಬಿಎನ್‌ಎಸ್ 2023ರ ಕಲಂ 112ರಡಿ ತನಿಖೆ ಮುಂದುವರಿದಿದೆ.


























