ವಿಟ್ಲ: ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ₹60.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮೆಟೀರಿಯಲ್ ರಿಕವರಿ ಫೆಸಿಲಿಟಿ (MRF) ಘಟಕವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರು.
ನಂತರ ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯ ಹಿನ್ನೆಲೆಯಲ್ಲಿ ಆಯೋಜಿಸಲಾದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಜಿಲ್ಲಾ ಪ್ರಕೋಷ್ಠಗಳ ಸಹಸಂಯೋಜಕ ಪ್ರಸನ್ನ ದರ್ಬೆ, ಜಿಲ್ಲಾ ಸೇವಾ ಸಂಕಲ್ಪ ಪ್ರಮುಖ್ ನಿತೀಶ್ ಕುಮಾರ್ ಶಾಂತಿವನ, ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ವಿದ್ಯಾಧರ ಜೈನ್, ಮಂಡಲ ಕಾರ್ಯದರ್ಶಿ ಶ್ರೀಕೃಷ್ಣ ವಿಟ್ಲ, ಪ್ರೀತಂ ಪೂಂಜಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಉದಯ ಆಲಂಗಾರ್, ಕಾರ್ಯದರ್ಶಿ ಹರೀಶ್ ಸಿ.ಎಚ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ಸಂಗೀತಾ ಪಾಣೆಮಜಲು, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸದಸ್ಯರಾದ ಜಯಂತ್ ಸಿಎಚ್, ಅರುಣ್ ವಿಟ್ಲ, ಕೃಷ್ಣ ಎನ್., ವಸಂತ ಕುಲಾಲ್, ರಕ್ಷಿತಾ ಸನತ್, ವಿಜಯಲಕ್ಷ್ಮಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶಕ್ತಿ ಕೇಂದ್ರ ಪ್ರಮುಖ್ ಶಿಶಿರ್ ಗೌಡ, ರಾಮದಾಸ್ ಶೆಣೈ, ಮೋನಪ್ಪ ಗೌಡ, ಜಯರಾಮ ಬಲ್ಲಾಳ್, ನವೀನಚಂದ್ರ ನಡುವಡ್ಕ, ಶರತ್ ಎನ್.ಎಸ್., ಮೋಹನ್ ಕಟ್ಟೆ, ಕೃಷ್ಣಪ್ಪ ಗಾಣಿಗ, ವಿಶ್ವನಾಥ ಕುಲಾಲ್, ಜಯಂತ ಗೌಡ, ಸತೀಶ್ ಕಾನತ್ತಡ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.



























