ಪುತ್ತೂರು:ಡಿಸೆಂಬರ್ 12 ಮತ್ತು 13ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಕೇಸರಿ ಸಂಗಮ ಹಾಗೂ ಹತ್ತೂರ ಒಡೆಯ ಶ್ರೀ ಮಹಾಲಿಂಗೇಶ್ವರ ದೇವರಿಗೆ ಲಕ್ಷ ಬಿಲ್ವಾರ್ಚನೆ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಮಹಾಲಿಂಗೇಶ್ವರ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.
ವಜ್ರದೇಹಿ ಮಠ ಗುರುಪುರದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.
ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದರು.
ಈ ಸಂದರ್ಭರದಲ್ಲಿ ಹಲವು ಗಣ್ಯರು, ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.


























