ಉಪ್ಪಿನಂಗಡಿ: ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಣೆಯಾದ ಮಾಧವ ಗೌಡ ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಉಪ್ಪಿನಂಗಡಿ ಹಳೆ ಸೇತುವೆ ಬಳಿಯ ನದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಶೋಧ ಕಾರ್ಯ ನಡೆಸುತ್ತಿದ್ದಾರೆ. ನದಿಯಲ್ಲಿ ವಿವಿಧ ಭಾಗಗಳಲ್ಲಿ ಹುಡುಕಾಟ ನಡೆಸಲಾಗುತ್ತಿದ್ದು, ಮಾಧವ ಗೌಡರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.


























