ಮಂಗಳೂರು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (SKPA) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ವಾರ್ಷಿಕ ಮಹಾಸಭೆ ಮಂಗಳೂರಿನ ಬೆಂದೂರ್‌ವೆಲ್‌ನ ಸೈಂಟ್ ಸೆಬಾಸ್ಟಿಯನ್ ಚರ್ಚ್ ಹಾಲ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೆಂಗಳೂರು ಕರ್ನಾಟಕ ಫೋಟೋಗ್ರಾಫರ್ಸ್ ಅಸೋಸಿಯೇಶನ್ (KPA) ಅಧ್ಯಕ್ಷ ಹೆಚ್.ಎಸ್. ನಾಗೇಶ್ ಉದ್ಘಾಟಿಸಿದರು. SKPA ಜಿಲ್ಲಾ ಅಧ್ಯಕ್ಷ ನವೀನ್ ರೈ ಪುತ್ತೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಚಾಲಕ ಗೋಪಾಲ್ ಸುಳ್ಯ ಅವರು ಛಾಯಾಚಿತ್ರ ಹಾಗೂ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಸೌತ್ ಕೆನರಾ ಫೋಟೋಗ್ರಾಫರ್ಸ್ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ. ವಾಸುದೇವ ರಾವ್ ಹಾಗೂ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್. ಬಂಟ್ವಾಳ್ ಭಾಗವಹಿಸಿದ್ದರು.
ಜಿಲ್ಲಾ ಕಾರ್ಯದರ್ಶಿ ಅಜಯ್ ಕುಮಾರ್, ಕೋಶಾಧಿಕಾರಿ ಹೆರಿಕ್ ಡಿಸೋಜ, ಉಪಾಧ್ಯಕ್ಷರಾದ ದೇವರಾಜ್ ಶೆಟ್ಟಿ ಸುರತ್ಕಲ್ ಹಾಗೂ ದತ್ತಾತ್ರೇಯ ಕಾರ್ಕಳ, ಜತೆ ಕಾರ್ಯದರ್ಶಿಗಳಾದ ಅಮೃತ್ ಬೀಜಾಡಿ ಹಾಗೂ ಹರೀಶ್ ಪಿ. ಕೋಟ್ಯಾನ್, ಸಂಘಟನಾ ಕಾರ್ಯದರ್ಶಿಗಳಾದ ರವಿ ಕೋಟ್ಯಾನ್ ಹಾಗೂ ಚಿದಾನಂದ ಉಳ್ಳಾಲ, ಕ್ರೀಡಾ ಕಾರ್ಯದರ್ಶಿಗಳಾದ ಹರೀಶ್ ಕುಂದರ್ ಹಾಗೂ ಪ್ರಕಾಶ್ ಸೇರಿಗಾರ, ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಕೌಡಂಗೆ, ಮಾಧ್ಯಮ ಕಾರ್ಯದರ್ಶಿ ಲೋಕೇಶ್ ಬಿ.ಎನ್. ಹಾಗೂ ಛಾಯಾ ಕಾರ್ಯದರ್ಶಿ ರಾಜೇಶ್ ಶಂಕರಪುರ ಸೇರಿದಂತೆ ವಿವಿಧ ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.



























