ಪುತ್ತೂರು: ಕುಂಜೂರುಪಂಜ ದೇವಸ್ಯ ಬಳಿಯಿಂದ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಬುಳೇರಿಕಟ್ಟೆ ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಪತ್ತೆಹಚ್ಚಲಾಗಿದೆ.
ವಾಹನದಲ್ಲಿ ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಕಾರ್ಯಾಚರಣೆಯಲ್ಲಿ 11 ಗೋವುಗಳನ್ನು ರಕ್ಷಿಸಲಾಗಿದೆ.
ವಾಹನವನ್ನು ಪತ್ತೆಹಚ್ಚಿದ ಸಂದರ್ಭದಲ್ಲಿ ಗೋಸಾಗಾಟದಲ್ಲಿ ತೊಡಗಿದ್ದವರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



























