ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯೋರ್ವ ಮಂಗಳೂರಿನ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ವೇಳೆ ನೀರುಪಾಲಾಗಿ ಮೃತಪಟ್ಟ ಘಟನೆ ಅ.4ರಂದು ಸಂಜೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ಅವರ ಪುತ್ರ ಶ್ರೇಯಸ್ (15) ಎಂದು ಗುರುತಿಸಲಾಗಿದೆ.
ಸ್ನೇಹಿತರೊಂದಿಗೆ ಸಮುದ್ರಕ್ಕೆ ಈಜಲು ತೆರಳಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



























