ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇಪು ಗ್ರಾಮದ ನೀರಕಜೆ ನಿವಾಸಿ ಟಿಪ್ಪರ್ ಚಾಲಕ ದಿನೇಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



























