ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ಕರಿಕ್ಕಳ–ನಿಂತಿಕಲ್ ನಡುವಿನ ಮುಚ್ಚಿಲ ಎಂಬಲ್ಲಿ ನಡೆದಿದೆ.
ಎದುರಿನಿಂದ ತೆರಳುತ್ತಿದ್ದ ಕಾರೊಂದು ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ, ಶಾಸಕಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರಣ ತಪ್ಪಿ ಎದುರಿನ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ಪರಿಣಾಮ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ.
ಅಪಘಾತದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬಳಿಕ ಶಾಸಕಿ ಬೇರೊಂದು ಕಾರಿನಲ್ಲಿ ತಮ್ಮ ಮನೆಗೆ ತೆರಳಿದರು.



























