ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ವೇಳೆ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಘಟನೆಯಲ್ಲಿ ಲಾರಿಗೆ ಹಾನಿಯಾಗಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮುಂಜಾನೆ ವೇಳೆ ಘಟನೆ ಸಂಭವಿಸಿದ್ದರಿಂದ ವಾಹನ ಸಂಚಾರ ಕಡಿಮೆ ಇದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಲಾರಿ ರಸ್ತೆ ಬದಿಗೆ ಬಿದ್ದಿರುವುದರಿಂದ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಹೆಚ್ಚಿನ ಅಡ್ಡಿಯಾಗಿಲ್ಲ ಎಂದು ತಿಳಿದುಬಂದಿದೆ.



























