ಪುತ್ತೂರು: ಡಿಸೆಂಬರ್ 12 ಮತ್ತು 13ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆಯನ್ನು ಪಾಣಾಜೆಯಲ್ಲಿ ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಗಿರಿಜಾ ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಡಾ. ಅಖಿಲೇಶ್ ಪಾಣಾಜೆ, ಕಾರ್ಯಾಧ್ಯಕ್ಷ ಅನಿಲ್ ಕಣ್ಣರ್ನೂಜಿ, ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ರಣಮಂಗಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ, ಪಾಣಾಜೆ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಉಮೇಶ್ ರೈ ಗಿಳಿಯಾಲು, ರಣಮಂಗಲ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ರೈ ಕೆದಂಬಾಡಿ ಹಾಗೂ ಮಾಜಿ ನಿರ್ದೇಶಕ ರವಿಶಂಕರ ಶರ್ಮ ಬೊಳ್ಳುಕ್ಕಲ್ಲು ಉಪಸ್ಥಿತರಿದ್ದರು.




























