ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮುದ್ಯ ನಿವಾಸಿ ಸಿಪ್ರಿಯಾನ್ ಡಿ.ಸೋಜರವರ ಪುತ್ರ ಸಚಿನ್ ಡಿ.ಸೋಜ(33ವ.) ಅವರು ಅ.8ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೃಷಿಕರಾಗಿದ್ದ ಸಚಿನ್ ಡಿ.ಸೋಜ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕೆಲ ವರ್ಷಗಳ ಹಿಂದೆಸರ್ಜರಿಸಹಮಾಡಿಕೊಂಡಿದ್ದರು. ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಅ.7ರಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಅ.8ರಂದು ಸಂಜೆ ನಿಧನರಾಗಿದ್ದಾರೆ.
ಮೃತರು ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಅ.11ರಂದು ಬೆಳಗ್ಗೆ ಅವರ ತೋಟದ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.




























