ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಮೇಲೆ ಬಿದ್ದಿರುವ ಮರ ಹಾಗೂ ವಿದ್ಯುತ್ ಕಂಬ ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.




























