ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಗರ, ಕಬಕ ಮತ್ತು ಬಲ್ನಾಡು ಫೀಡರ್‌ನಲ್ಲಿ ಅ.10 ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ನಗರ, ಬನ್ನೂರು, ರಕ್ತೇಶ್ವರಿ ವಠಾರ, ಪೆರಿಯತ್ತೋಡಿ, ಕೊಡಿಪ್ಪಾಡಿ, ಪಡ್ನೂರು , ಕಬಕ, ಬಲ್ನಾಡು ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.




























