ಸುಳ್ಯ:ನಾವೂರು ಕಾಲೊನಿಯಲ್ಲಿ ಮುತ್ತು ಎಂಬವರ ಪುತ್ರಿ ಚಾಂದಿನಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮಧ್ಯಾಹ್ನದ ವೇಳೆಗೆ ಮನೆಯೊಳಗೆ ಚಾಂದಿನಿ ಅವರು ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಸಂಜೆ ತಾಯಿ ಮನೆಗೆ ಮರಳಿದಾಗ ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿಕೊಂಡಿರುವುದು ಗಮನಕ್ಕೆ ಬಂದಿದೆ. ಬಳಿಕ ಕಿಟಕಿಯ ಮೂಲಕ ಒಳಗೆ ನೋಡಿದಾಗ ಚಾಂದಿನಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಹಜರು ಕಾರ್ಯ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.



























