ವಿಟ್ಲ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತರ ವಿವಾದಾತ್ಮಕ ಧೋರಣೆ ಹಾಗೂ ಎಸ್‌ಐಆರ್ ಅಕ್ರಮಗಳನ್ನು ತೀವ್ರವಾಗಿ ಖಂಡಿಸಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ ಮಾತನಾಡಿದರು.ಈ ವೇಳೆ ಪ್ರತಿಭಟನಾಕಾರರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್‌ರ ಪ್ರತಿಕೃತಿ ದಹಿಸಿ, ಚುನಾವಣಾ ಪ್ರಕ್ರಿಯೆಯಲ್ಲಿನ ಪಾರದರ್ಶಕತೆ ಕೊರತೆ ಹಾಗೂ ಅಕ್ರಮಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ವಿಟ್ಲ ಪಪಂ ವಿರೋಧ ಪಕ್ಷದ ನಾಯಕ ವಿ.ಕೆ.ಎಂ.ಅಶ್ರಫ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ವಿಟ್ಲ ಪಪಂ ಸದಸ್ಯರಾದ ವಿ.ಅಬ್ದುಲ್ ರಹ್ಮಾನ್ ನೆಲ್ಲಿಗುಡ್ಡೆ, ಹಾನೆಸ್ಟ್ ಇಕ್ವಾಲ್, ವಿಟ್ಲ ಉಪವಿಭಾಗ ಮೆಸ್ಕಾಂ ಸಲಹಾ ಸಮಿತಿಯ ಸದಸ್ಯ ಕರೀಂ ಕುದ್ದುಪದವು, ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನಕರ ಆಳ್ವ, ವಿಟ್ಲ ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿ.ಕೆ.ಎಂ.ಹಂಝ, ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಘಟಕದ ಉಪಾಧ್ಯಕ್ಷ ಕೇಶವ ನಾಯ್ಕ, ಅಕ್ರಮ-ಸಕ್ರಮ ಸಮಿತಿಯ ಸದಸ್ಯ ರಾಮಣ್ಣ ಪಿಲಿಂಜ, ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಅಬ್ದು ನವಗ್ರಾಮ, ಮೆಸ್ಕಾಂ ಶಾಖೆಯ ಸಲಹಾ ಸಮಿತಿ ಸದಸ್ಯ ಸಿರಾಜ್ ಮಣಿಲ, ವಲಯ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಅಳಿಕೆ, ಕೋಟಿ ಪೂಜಾರಿ, ಸಂತೋಷ್, ಶೈಕ್ ಅಲಿ ಸೆರಾಜೆ, ಸುಶಾಂತ್ ಶೆಟ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಂಶೀರ್ ನೆಲ್ಲಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.



























