ಸುಳ್ಯ: ಕೊಚ್ಚಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಕಮಜಲು ಗ್ರಾಮದ ಸುಣ್ಣಮೂಲೆ ಪೆಲಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರ ಇಯಾಜ್ (24) ಮೃತಪಟ್ಟಿದ್ದಾರೆ.
ಇಯಾಜ್ ಅವರು ಕೆಲ ಸಮಯದಿಂದ ಕೊಚ್ಚಿಯಲ್ಲಿ ಕೆಲಸ ಮಾಡುತ್ತಿದ್ದರು. ಅ.10ರಂದು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಇಯಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



























