ಸುಳ್ಯ: ಪಿಕ್‌ಅಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಬೇರಿಯ ನಿವಾಸಿ ಸುದೇಶ್ (21) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೊಡಿಯಾಲ ಗ್ರಾಮದ ಬೇರಿಯ ನಿವಾಸಿಗಳಾದ ಪೊಡಿಯ ಮತ್ತು ವಿಮಲ ದಂಪತಿಯ ಪುತ್ರ ಸುದೇಶ್ ಅವರು ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈಶ್ವರಮಂಗಲದಲ್ಲಿ ಪಿಕ್‌ಅಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು.
ಅಪಘಾತದಲ್ಲಿ ಸುದೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



























