ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸೋನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದು, ಘಟನೆಗೆ ಅಕ್ರಮ ಸಂಬಂಧದ ಶಂಕೆ ಕಾರಣ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಶಿವಲಿಂಗಪ್ಪನನ್ನು ಬಂಧಿಸಿದ್ದಾರೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



























