ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಕ್ಟೋಬರ್ 12ರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದಾನೆ.
ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ಅನಾಹುತದಲ್ಲಿ ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯುತ್ ಆಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.



























