ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರಂದು ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭ ಹಾಗೂ ಮಹಿಳಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.



























