ವಿಟ್ಲ: ಕಳ್ಳತನ ಪ್ರಕರಣದಲ್ಲಿ ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಮಲಪ್ಪುರಂ ನಿವಾಸಿ ರಂಶೀದ್ ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಅ.ಕ್ರ. 110/2019ರ ಐಪಿಸಿ ಕಲಂ 457, 380ರ ಅಡಿಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಈತ, ಕಳೆದ ಒಂದೂವರೆ ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಅಕ್ಟೋಬರ್ 13ರಂದು ವಿಟ್ಲ ಪೊಲೀಸ್ ಠಾಣೆಯ ಎಎಸ್ಐ ಜಯರಾಮ ಹಾಗೂ ಪೊಲೀಸ್ ಸಿಬ್ಬಂದಿ ಶಿವಾನಂದ (ಸಿಪಿಸಿ 2462) ಅವರು ಕೇರಳದ ನೀಲಂಬೂರು ವಂಡೂರು ಎಂಬಲ್ಲಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

























