ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಲಾರಿಯು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದ್ದು, ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪೂರ್ಣ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳು ಸಾಲುಗಟ್ಟಿ ನಿಂತಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ವಾಹನ ಸಂಚಾರವನ್ನು ಸುಗಮಗೊಳಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ. ಸಂಚಾರ ದಟ್ಟಣೆ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.

























