ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಿರುವ ಘಟನೆ ಅ.17ರಂದು ರಾತ್ರಿ ಪುತ್ತೂರಿನಲ್ಲಿ ನಡೆದಿದೆ.
ಕಡಬದ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದವರು. ಇವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅ.17ರಂದು ರಾತ್ರಿ ಲಾಡ್ಜ್ನಲ್ಲಿದ್ದ ವೇಳೆ ಫಾರೂಕ್, ಸೋನು ಹಾಗೂ ಇಷಾನ್ ಎಂಬವರು ಅಲ್ಲಿಗೆ ಬಂದು ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮಹಮ್ಮದ್ ರಿಫಾಯಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 126(2), 352, 351(2) ಮತ್ತು 115(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

























