ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆದಿದೆ. ಮುಂಬೈನ ಜುಹು ಪ್ರದೇಶದಲ್ಲಿ ಮೂವರು ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದು, ನಟ ಅಪಾಯದಿಂದ ಪಾರಾಗಿದ್ದಾರೆ.
ನಟ ಟೈಗರ್ ಶ್ರಾಫ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಆದರೆ, ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಅವರು ಫುಟ್ಬಾಲ್ ಮೈದಾನದಿಂದ ಹೊರಬರುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆಯ ನಂತರ ಒಂದು ವೀಡಿಯೋ ಹೊರಬಿದ್ದಿದ್ದು, ಅದರಲ್ಲಿ ಅನಿಲ್ ಪಂಡಿತ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಬ್ಬ, ತಾನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸೇರಿದವನೆಂದು ಹೇಳಿಕೊಂಡಿದ್ದಾನೆ.
ಟೈಗರ್ ಶ್ರಾಫ್ ತಮ್ಮ ಸೂಚನೆಗಳನ್ನು ಪಾಲಿಸುತ್ತಿರಲಿಲ್ಲ. ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಕಾರಣ, ಅವರನ್ನು ತಮ್ಮ ‘ಹಿಟ್ ಲಿಸ್ಟ್’ (ಗುರಿಯ ಪಟ್ಟಿಯಲ್ಲಿ) ಸೇರಿಸಲಾಗಿದೆ ಎಂದು ಆತ ತಿಳಿಸಿದ್ದಾನೆ.


























