ಉಪ್ಪಿನಂಗಡಿ: ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿತ್ತು. ಈ ವೇಳೆ ಮಂಜುನಾಥ್ ಎಂಬಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಹಾಗೂ ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.


























