ಉಪ್ಪಿನಂಗಡಿ: ಮದ್ಯದ ಅಮಲಿನಲ್ಲಿ ಮುನ್ನ ಎಂಬಾತ ಮಂಜುನಾಥ್ ಅವರ ಮನೆಯವರಿಗೆ ಅವಾಚ್ಯವಾಗಿ ಬೈದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿರುವುದಾಗಿ ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 135/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 194, 296, 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1B)(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ಮುನ್ನ ಎಂಬಾತ ಮಂಜುನಾಥ್ ಅವರ ಮನೆಯವರಿಗೆ ಅವಾಚ್ಯವಾಗಿ ನಿಂದಿಸಿದ ವಿಚಾರವಾಗಿ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿರುವುದು ತಿಳಿದುಬಂದಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


























