ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಧರ್ಮಸ್ಥಳ ಡಿಪೋದಲ್ಲಿ ಬಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಗುಳಿತಡ್ಕ ನಿವಾಸಿ ಪ್ರಶಾಂತ ಗೌಡ (35) ಅವರು ಅಲ್ಪಕಾಲದ ಅಸೌಖ್ಯದಿಂದ ಅ.19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಅವಿವಾಹಿತರಾಗಿದ್ದು, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.


























