ಮಂಗಳೂರು: ಮೆಲ್ಕಾರ್–ಮುಡಿಪು ಮಾರ್ಗದ ಬೋಳಿಯರ್ ಪೆಟ್ರೋಲ್ ಪಂಪ್ ಬಳಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಹಮ್ಮದ್ ಅರ್ಫಾನ್ ಹಾಗೂ ಹಿಂಬದಿ ಸವಾರ ಜುನೈದ್ ಎಂದು ಗುರುತಿಸಲಾಗಿದೆ.
ವೇಗವಾಗಿ ಬಂದ ಪಿಕಪ್ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಸಮೀಪದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ಕಂಬ ಉರುಳಿ ಬಿದ್ದಿದೆ. ಈ ವೇಳೆ ಬೈಕ್ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಭೀಕರ ದೃಶ್ಯಗಳು ಸ್ಥಳೀಯ ಪೆಟ್ರೋಲ್ ಪಂಪ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಮಾಹಿತಿ ತಿಳಿದ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

























