ಬೆಳ್ಳಾರೆ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅ.20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.
ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಗುರವ, ಇಸೂಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟಕ್ಕೆ ಬಳಸಲಾಗಿದ್ದ ₹18,150 ನಗದು, ಇಸ್ಪೀಟು ಎಲೆಗಳು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.


























